2012 ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿದೆ. ಅಪರಾಧಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್ ಹಾಗೂ ಪವನ್ ಗುಪ್ತಾ ಇಂದು ಬೆಳಗ್ಗೆ 5.30ಕ್ಕೆ ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೇರಿದರು.
ಸಾವಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಹೋರಾಟ ನಡೆಸಿ ಮೂರು ಬಾರಿ ಕುಣಿಕೆಯಿಂದ ಸದ್ಯಕ್ಕೆ ಪಾರಾಗಿದ್ದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆಯಾಗಿದೆ.
ಒಟ್ಟು 6 ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾನೆ. ನಾಲ್ವರು ಇಂದು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ.