Home ರಾಜ್ಯ ಪೊಲೀಸ್​​ ಇನ್ಸ್​ಪೆಕ್ಟರ್​ಗೆ ಜೀವಬೆದರಿಕೆ ಪ್ರಕರಣ : ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್​ ..!

ಪೊಲೀಸ್​​ ಇನ್ಸ್​ಪೆಕ್ಟರ್​ಗೆ ಜೀವಬೆದರಿಕೆ ಪ್ರಕರಣ : ಅಪ್ರಾಪ್ತ ಸೇರಿ ಇಬ್ಬರು ಅರೆಸ್ಟ್​ ..!

ಮಂಗಳೂರು : CAA ಮತ್ತು NRC ವಿರೋಧಿ ಹಿಂಸಾತ್ಮಕ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ವಿಚಾರವನ್ನೇ ಮುಂದಿಟ್ಟುಕೊಂಡು ಕರೆ ಮಾಡಿ ಪೊಲೀಸ್ ಇನ್ಸ್ ಪೆಕ್ಟರನ್ನೇ ಬೆದರಿಸಿದ್ದ ಇಬ್ಬರು ಆರೋಪಿಗಳನ್ನು 8 ತಿಂಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ17 ರ ಹರೆಯದ ಓರ್ವ ಅಪ್ರಾಪ್ತ  ಹಾಗೂ ಪ್ರಮುಖ ಆರೋಪಿ ಮಂಗಳೂರಿನ ಬೊಂಡತಿಲದ ಮಹಮ್ಮದ್ ಶಾಫಿಕ್ (20) ಬಂಧಿತರು. 

ಡಿಸೆಂಬರ್ 26 ರಂದು ಕದ್ರಿ ಠಾಣಾ ಇನ್ಸ್ ಪೆಕ್ಟರ್ ಶಾಂತರಾಮ ಅವರ ಸರ್ಕಾರಿ  ಮೊಬೈಲ್​ಗೆ ಕರೆ ಮಾಡಿದ್ದ ಆರೋಪಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವಬೆದರಿಕೆ ಒಡ್ಡಿದ್ದರು. ಈ ನಿಟ್ಟಿನಲ್ಲಿ ಶಾಂತರಾಮ್ ಅವರು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರನ್ನ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. 

ಕಳೆದ ವರ್ಷ ಡಿಸೆಂಬರ್ 19 ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ CAA, NRC ವಿರೋಧಿ ಪ್ರತಿಭಟನೆ ನಡೆದು ಹಿಂಸಾರೂಪಕ್ಕೆ ತಿರುಗಿತ್ತು. ಇದಾಗುತ್ತಲೇ ಪೊಲೀಸರು ಗಲಭೆ ನಿಯಂತ್ರಿಸಲು ನಡೆಸಿದ ಗೋಲಿಬಾರ್​ನಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಇದರ ವಿರುದ್ಧ ವ್ಯಕ್ತವಾದ ಆಕ್ರೋಶದಿಂದ ಈ ಇಬ್ಬರು ಆರೋಪಿಗಳು ಪೊಲೀಸ್ ಅಧಿಕಾರಿ ಶಾಂತರಾಮ್​​ ಅವರಿಗೆ ಬೆದರಿಕೆಯೊಡ್ಡಿದ್ದರು.

– ಇರ್ಷಾದ್​ ಕಿನ್ನಿಗೋಳಿ 

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments