Home ಸಿನಿ ಪವರ್ ಬಾಲ್ಯದ ಗೆಳತಿ ಜೊತೆ ದಾಂಪತ್ಯಕ್ಕೆ ಕಾಲಿಟ್ಟ 'ಬಹದ್ದೂರ್' ಹುಡುಗ

ಬಾಲ್ಯದ ಗೆಳತಿ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ‘ಬಹದ್ದೂರ್’ ಹುಡುಗ

ಬೆಂಗಳೂರು: ಚಂದನವನದ ‘ಬಹದ್ದೂರ್’ ಹುಡುಗ ಧ್ರುವ ಸರ್ಜಾ ಬಾಲ್ಯದ ಗೆಳತಿ ಪ್ರೇರಣಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಜೆಪಿ ನಗರದ ಸಂಸ್ಕೃತ ಬೃಂದಾವನ ಕನ್ವೆನ್ಷನ್ ಹಾಲಲ್ಲಿ ಧ್ರುವ – ಪ್ರೇರಣಾ ಹೊಸ ಜೀವನಕ್ಕೆ ಎಂಟ್ರಿಕೊಟ್ಟರು‌‌‌.
ವೃಶ್ಚಿಕ ಶುಭಲಗ್ನದಲ್ಲಿ ಸ್ಯಾಂಡಲ್ವುಡ್ ನ ‘ಅದ್ದೂರಿ’ ಹೀರೋ ಪ್ರೇರಣಾ ಕೈ ಹಿಡಿದರು.
ತಿರುಪತಿ ವೆಂಕಟೇಶ್ವರನ ಥೀಮ್ ನಲ್ಲಿ ಮುಖ್ಯ ಮಂಟಪವಿದ್ದು, ಶಿವ -ಪಾರ್ವತಿ , ಗಣಪ ಬ್ಯಾಕ್ ಡ್ರಾಪ್ ನಲ್ಲಿ ಮತ್ತೊಂದು ಮಂಟಪ ಸೇರಿದಂತೆ ಒಟ್ಟು ಮೂರು ಮಂಟಪ, ಸ್ವಾಗತ ದ್ವಾರದಿಂದಲೇ ಬಗೆ ಬಗೆಯ ಹೂವಿನನಿಂದ ಸಿಂಗಾರಗೊಂಡಿರುವ ‘ಭರ್ಜರಿ’ ಸೆಟ್ ನಲ್ಲಿ ಧ್ರುವ – ಪ್ರೇರಣಾ ವಿವಾಹ ಮಹೋತ್ಸವ ಜರುಗಿದೆ.
ಸಂಬಂಧಿಕರು, ಸ್ನೇಹಿತರು, ಚಿತ್ರರಂಗದವರು ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ನಾಳೆ ಅಭಿಮಾನಿಗಳಿಗಾಗಿ ವಿಶೇಷ ಔತಣಕೂಟ ನಡೆಯಲಿದೆ

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments