Friday, October 7, 2022
Powertv Logo
Homeರಾಜ್ಯಶಾಲಾ ಮಕ್ಕಳಿದ್ದ ಬಸ್ ಮರಕ್ಕೆ ಡಿಕ್ಕಿ

ಶಾಲಾ ಮಕ್ಕಳಿದ್ದ ಬಸ್ ಮರಕ್ಕೆ ಡಿಕ್ಕಿ

ಕಲಬುರಗಿ: ಶಾಲಾ ಮಕ್ಕಳು  ಪ್ರವಾಸಕ್ಕೆ ಹೊರಟಿದ್ದ ಬಸ್ಸೊಂದು ಅಪಘಾತಕ್ಕೀಡಾಗಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.  

ಚನ್ನವೀರ ಶಾಲೆಯ ವಿದ್ಯಾರ್ಥಿಗಳು ಇಂದು ಬೆಳಗ್ಗೆ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ  ಕಲಬುರಗಿ ನಗರದ ಜೇವರ್ಗಿ ರಸ್ತೆಯಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಕಲಬುರಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

LEAVE A REPLY

Please enter your comment!
Please enter your name here

- Advertisment -

Most Popular

Recent Comments