Home ದೇಶ-ವಿದೇಶ ಕೋಯಿಕ್ಕೋಡ್​ ವಿಮಾನ ದುರಂತ : ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಕೋಯಿಕ್ಕೋಡ್​ ವಿಮಾನ ದುರಂತ : ಸಾವಿನ ಸಂಖ್ಯೆ 18ಕ್ಕೆ ಏರಿಕೆ

ಕೋಯಿಕ್ಕೋಡ್ : ಕರಿಪುರ್ ವಿಮಾನ  ನಿಲ್ದಾಣದಲ್ಲಿ ಸಂಭವಿಸಿರುವ ವಿಮಾನ ದುರಂತದ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ದುಬೈನಿಂದ ಕೋಯಿಕ್ಕೋಡ್​ ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ( AXB 1344, B737 ) ಶುಕ್ರವಾರ ಸಂಜೆ 7.40ಕ್ಕೆ ಲ್ಯಾಂಡಿಂಗ್ ಆಗುವಾರ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಅಪಘಾತಕ್ಕೀಡಾಗಿದೆ. ನಿನ್ನೆ ಆರಂಭಿಕ ಮಾಹಿತಿ ಪ್ರಕಾರ ಒಬ್ಬ ಪೈಲಟ್ ಮತ್ತು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.  ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇಬ್ಬರು ಪೈಲಟ್​ಗಳು ಸೇರಿದಂತೆ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕ್ಯಾಪ್ಟನ್ ದೀಪಕ್ ವಸಂತ್ ಸಾಠೆ ಹಾಗೂ ಫಸ್ಟ್ ಆಫೀಸರ್ ಅಖಿಲೇಶ್ ಕುಮಾರ್ ಮೃತ ಪೈಲಟ್ ಗಳಾಗಿದ್ದು, ಕ್ಯಾಪ್ಟನ್ ಸಾಠೆ ಅವರು ವಾಯುಪಡೆಯಲ್ಲಿ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬೋಯಿಂಗ್ 737 ವಿಮಾನಗಳನ್ನು ಚಾಲನೆ ಮಾಡುವಲ್ಲಿ ಅತ್ಯಂತ ಅನುಭವ ಹೊಂದಿದ್ದರು. ಸಾಠೆ ಅವರಿಗೆ ‘58 ಎನ್​ಡಿಎ’ ರಾಷ್ಟ್ರಪತಿ ಚಿನ್ನದ ಪದಕ ಪ್ರದಾನ ಮಾಡಲಾಗಿತ್ತುಎಂದು ವರದಿಯಾಗಿದೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments