Home ರಾಜ್ಯ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್

1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್

ಬೆಂಗಳೂರು : ಕೊರೋನಾ ಕೇಸ್ ಹೆಚ್ಚಾದ ಹಿನ್ನೆಲೆ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಪರೀಕ್ಷೆ ರದ್ದು ಮಾಡಿ ನೇರವಾಗಿ ಮುಂದಿನ ತರಗತಿಗೆ ತೇರ್ಗಡೆ ಮಾಡಿದ ಶಿಕ್ಷಣ ಇಲಾಖೆ. ರಾಜ್ಯದಲ್ಲಿ 1 ರಿಂದ 9ನೇ ತರಗತಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್ ಎಂದು ರಾಜ್ಯ ಶಿಕ್ಷಣ ಇಲಾಖೆ ಘೋಷಿಸಿದೆ. 

ನಿಗದಿಯಂತೆ SSLC ಪರೀಕ್ಷೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ 1 ರಿಂದ 9ನೇ ತರಗತಿಯವರಿಗೆ ವಿನಾಯ್ತಿ ನೀಡಿದೆ. ಜೂನ್​ 21ರಿಂದ ಜುಲೈ 5ರವರೆಗೆ SSLC ಪರೀಕ್ಷೆಗಳು ನಡೆಯಲಿವೆ. 

1ರಿಂದ 7ನೇ ತರಗತಿ ಮಕ್ಕಳಿಗೆ ಮೇ1ರಿಂದ ಜೂನ್​ 14ರವರೆಗೆ ಬೇಸಿಗೆ ರಜೆ ಘೋಷಿಸಿದ ಸರ್ಕಾರ. ಇನ್ನು ಜೂನ್​ 15ರಿಂದ 2021-22ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ನೀಡಿದ್ದು ಜುಲೈ 15ರಿಂದ 2021-22ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ. 

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments