Site icon PowerTV

ಬಿಎಸ್​ವೈ ಸಮ್ಮುಖದಲ್ಲಿ ಬಿಜೆಪಿ ಸೇರಿದ್ರು ಜಾಧವ್..!

ಕಲಬುರಗಿ : ಮಾಜಿ ಶಾಸಕ ಉಮೇಶ್​ ಜಾಧವ್​ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜಾಧವ್ ಬಿಜೆಪಿ ಸೇರಿದ್ದು, ಮೋದಿ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿಂಚೊಳ್ಳಿ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಕಾಂಗ್ರೆಸ್​ ಮೇಲಿನ ಅಸಮಧಾನದಿಂದ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿ ಸೇರ್ಪಡೆಗೊಂಡಿರುವ ಇವರು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಸೋಲಿಲ್ಲದ ಸರದಾರರಾಗಿರುವ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಶಿಷ್ಯಾಸ್ತ್ರ ಎಂಬಂತೆ ಉಮೇಶ್ ಜಾಧವ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.

Exit mobile version