Site icon PowerTV

ರೇವಣ್ಣ ಹೇಳಿಕೆಗೆ ನಿಖಿಲ್ ಕ್ಷಮೆಯಾಚನೆ..!

ಮಂಡ್ಯ : ಸಚಿವ ಹೆಚ್​.ಡಿ ರೇವಣ್ಣ ಅವರು ಸುಮಲತಾ ಅವರ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆ ಜೆಡಿಎಸ್​ಗೆ ಹಾಗೂ ಅದಕ್ಕಿಂತ ಮುಖ್ಯವಾಗಿ ಮಂಡ್ಯದಲ್ಲಿ ಸುಮಲತಾ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ದೊಡ್ಡಮಟ್ಟಿನ ಪೆಟ್ಟು ನೀಡುವ ಸಾಧ್ಯತೆ ದಟ್ಟವಾಗಿದೆ.
ಸುಮಲತಾ ವಿರುದ್ಧ ರೇವಣ್ಣ ನೀಡಿರುವ ಹೇಳಿಕೆ ಪಕ್ಷಕ್ಕೆ ದೊಡ್ಡ ಡ್ಯಾಮೇಜ್. ಬೆಳಗ್ಗೆ ರೇವಣ್ಣ ಅವರ ಪರವಾಗಿ ಸ್ವತಃ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕ್ಷಮೆ ಕೇಳಿದ್ದರು. ಇದೀಗ ನಿಖಿಲ್​ ಕುಮಾರಸ್ವಾಮಿ ಕೂಡ ರೇವಣ್ಣ ಅವರ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ.
‘ಈ ವಿಚಾರವಾಗಿ ನಾನು ಕ್ಷಮೆಯಾಚಿಸುತ್ತೇನೆ. ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡೋದು ತಪ್ಪು. ಮಹಿಳೆಯರ ಬಗ್ಗೆ JDSಗೆ ಅಪಾರ ಗೌರವವಿದೆ’ಎಂದರು.

Exit mobile version