ಪಣಜಿ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನರಾಗಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಪರಿಕ್ಕರ್ ಅವರ ಅಂತ್ಯಕ್ರಿಯೆಗೂ ಮುನ್ನವೇ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಹಪಹಪಿಸುತ್ತಿದೆ.
ಗೋವಾದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಚಿಸೋಕೆ ಅವಕಾಶ ಕೊಡಿ ಅಂತ ರಾಜ್ಯಪಾಲರಾದ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದೆ.
ಸರ್ಕಾರ ರಚಿಸೋಕೆ ಅವಕಾಶ ಕೊಡಿ ಎಂಬ ಕಾಂಗ್ರೆಸ್ ಮನವಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿಯೂ ಬಹಳಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಸಾವಿನಲ್ಲೂ ರಾಜಕೀಯ ಮಾಡ ಹೊರಟ ಕಾಂಗ್ರೆಸ್ ನಡೆ ಟೀಕೆಗೆ ಗುರಿಯಾಗಿದೆ.
ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ..!
RELATED ARTICLES