ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆದು ಬಿಜೆಪಿಗೆ ಸೇರುತ್ತಿದ್ದಾರೆ. ಮಾಜಿ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಲಕರೆಡ್ಡಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಜಾಧವ್ ಅವರ ರಾಜೀನಾಮೆ ಮಾತ್ರ ಇನ್ನೂ ಅಂಗೀಕಾರವಾಗಿಲ್ಲ. ರಾಜೀನಾಮೆಗೆ ಸ್ಪಷ್ಟ ಕಾರಣ ನೀಡದ ಹಿನ್ನೆಲೆಯಲ್ಲಿ ರಾಜೀನಾಮೆ ಅಂಗೀಕರಿಸಲಾಗಿಲ್ಲ ಅಂತ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಕಮಲದ ತೆಕ್ಕೆಗೆ ಮತ್ತೊಬ್ಬ ಕಾಂಗ್ರೆಸ್ ನಾಯಕ..!
RELATED ARTICLES