Site icon PowerTV

ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್ ಬಿಜೆಪಿಗೆ ಸೇರ್ಪಡೆ..!

ನವದೆಹಲಿ: ಲೋಕಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. “ಪ್ರಧಾನಿ ಮೋದಿ ಅವರ ದೇಶದ ಕುರಿತಾದ ನಿಲುವುಗಳಿಂದಾಗಿ ನಾನು ಬಿಜೆಪಿ ಸೇರುವ ನಿರ್ಧಾರ ಮಾಡಿದೆ. ದೇಶ ಸೇವೆ ಮಾಡಲು ಇದೊಂದು ಉತ್ತಮ ವೇದಿಕೆ” ಅಂತ ಗೌತಮ್ ಗಂಭೀರ್​ ಹೇಳಿದ್ದಾರೆ.

ಕೇಂದ್ರ ಸಚಿವರಾದ ಅರುಣ್​ ಜೇಟ್ಲಿ, ರವಿ ಶಂಕರ್ ಪ್ರಸಾದ್​ ಅವರ ಸಮ್ಮುಖದಲ್ಲಿ ಗೌತಮ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ವರಿಷ್ಠರು ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ರಿಲೀಸ್ ಮಾಡಿದ್ದರು. ಇನ್ನೂ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲು ಬಾಕಿ ಇದ್ದು, ಗೌತಮ್​ ಗಂಭೀರ್​ ಅವರು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವ ಪಡೆದಿದೆ. ಲೋಕಸಭಾ ಚುನಾವಣೆಯಲ್ಲೂ ಗೌತಮ್​ ಗಂಭೀರ್ ದೆಹಲಿಯಿಂದ​ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

Exit mobile version