ಬೆಂಗಳೂರು : ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ರಾಜಕೀಯ ತತ್ವವನ್ನು ಬದಿಗೊತ್ತಿ ‘ಪ್ರಜಾಕೀಯ’ ಅನ್ನೋ ಕಲ್ಪನೆಯಲ್ಲಿ ಹುಟ್ಟಿಕೊಂಡಿರೋ ರಿಯಲ್ ಸ್ಟಾರ್ ಉಪೇಂದ್ರ ಅವರ ಪಕ್ಷ ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ)ದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಇದರೊಂದಿಗೆ ಉಪ್ಪಿಯ ಪಕ್ಷ ‘ಪ್ರಜಾಕೀಯ’ ಎಂಟ್ರಿಕೊಟ್ಟಿದೆ.
ಬೆಂಗಳೂರು ದಕ್ಷಿಣ ಸೇರಿದಂತೆ 14 ಕ್ಷೇತ್ರಗಳಲ್ಲಿ ಯುಪಿಪಿ ಕ್ಯಾಂಡಿಡೇಟ್ಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಪಕ್ಷದ ಅಧ್ಯಕ್ಷ ಉಪ್ಪಿ ಸಾಥ್ ನೀಡಿದ್ದಾರೆ. ಎಲ್ಲಾ 28 ಕ್ಷೇತ್ರಗಳಲ್ಲಿ ನಮ್ಮವರು ಸ್ಪರ್ಧಿಸಲಿದ್ದಾರೆ ಅಂತ ಉಪೇಂದ್ರ ಹೇಳಿದ್ದಾರೆ.
ರಿಯಲ್ ಸ್ಟಾರ್ ಉಪ್ಪಿ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!
RELATED ARTICLES