Site icon PowerTV

ಮಂಡ್ಯ ಚುನಾವಣಾಧಿಕಾರಿ ವಿರುದ್ಧ ತನಿಖೆ..!

ಮಂಡ್ಯ: ಚುನಾವಣಾಧಿಕಾರಿ ವಿರುದ್ಧ ತನಿಖೆ ನಡೆಸಲಾಗುತ್ತದೆ ಅಂತ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,”ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮುಗಿದಿದೆ. ಜಿಲ್ಲಾ ಚುನಾವಣಾಧಿಕಾರಿ ನಾಮಪತ್ರ ಅಂಗೀಕರಿಸಿದ್ದಾರೆ. ಇನ್ಮುಂದೆ ಏನೇ ಇದ್ದರೂ ನ್ಯಾಯಾಲಯಕ್ಕೆ ಹೋಗಬೇಕು. ಆಡಳಿತಾತ್ಮಕ ಲೋಪದ ಬಗ್ಗೆ ಪರಿಶೀಲನೆ ಮಾಡ್ತೀವಿ. ಚುನಾವಣಾಧಿಕಾರಿಗಳ ಏಕಪಕ್ಷೀಯ ನಡೆ ಬಗ್ಗೆಯೂ ತನಿಖೆ ಮಾಡಲಾಗುತ್ತದೆ” ಅಂತ ಹೇಳಿದ್ದಾರೆ.

ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಚುನಾವಣಾಧಿಕಾರಿಗಳ ಸಭೆ ನಡೆದಿದೆ. ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾ ವೀಕ್ಷಕರ ಜೊತೆ ಸಭೆ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಅವರು ಮಂಡ್ಯ ಡಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಿಖಿಲ್ ನಾಮಪತ್ರ ಗೊಂದಲ, ವಿಡಿಯೋ ಗೊಂದಲ, ಸುಮಲತಾ ಬೆಂಬಲಿಗರ ದೂರಿನ ಬಗ್ಗೆ ಚರ್ಚೆ ನಡೆಸಲಾಗಿದೆ.

Exit mobile version