Site icon PowerTV

112 ಮಕ್ಕಳಿಗೆ ಶಿವಕುಮಾರ ಸ್ವಾಮಿಗಳ ಹೆಸರು ನಾಮಕರಣ

ತುಮಕೂರು: ಶಿವೈಕ್ಯ‌ ಸಿದ್ಧಗಂಗಾ ಶ್ರೀ ಶಿವಕುಮಾರ ಶ್ರೀಗಳ 112ನೇ ಜಯಂತಿ ತುಮಕೂರಿನಲ್ಲಿ ಇಂದು ನಡೆಯಲಿದೆ. ಜಯಂತಿ ಆಚರಣೆಗೆ ಸಿದ್ಧಗಂಗಾ ಮಠದಲ್ಲಿ ಸಕಲ ಸಿದ್ದತೆ ಪೂರ್ಣಗೊಂಡಿದೆ. ಬೆಳಗ್ಗೆ ಶಿವೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ಪೂಜೆ ನಡೆಸಿ, ಬಳಿಕ‌ 8 ಗಂಟೆಯಿಂದ 10.30 ರವರೆಗೆ ನಾಮಕರಣ ಮಹೋತ್ಸವ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ 112 ಮಕ್ಕಳಿಗೆ ಶಿವಕುಮಾರ ಸ್ವಾಮಿಗಳ ಹೆಸರನ್ನು ನಾಮಕರಣ ಮಾಡಲಾಗುತ್ತದೆ. ಬಳಿಕ 11 ಗಂಟೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು‌ ಸೇರಿದಂತೆ ಹಲವು ಮಠಾಧಿಪತಿಗಳು, ಮೈಸೂರು ಒಡೆಯರ್ ರಾಜವಂಶಸ್ಥ ಯದುವೀರ್ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಮುಖಂಡರಿಗೆ ಆಹ್ವಾನ ನೀಡಿಲ್ಲ.

Exit mobile version