ಚಿಕ್ಕಬಳ್ಳಾಪುರ: ಚುನಾವಣೆ ಸಮೀಪದಲ್ಲಿರುವಾಗಲೇ ಚೆಕ್ಪೋಸ್ಟ್ ಸೇರಿದಂತೆ ಎಲ್ಲಾ ಕಡೆಗಳಲ್ಲಿಯೂ ಪೊಲೀಸರು ನಿಗಾವಹಿಸಿದ್ದಾರೆ. ಇದೀಗ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಇಂಡಿಕಾ ಕಾರಿನಲ್ಲಿ ಸಿಕ್ಕಿದ 20 ಲಕ್ಷ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಇಂಡಿಕಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಕಾರಿನಲ್ಲಿ ನಗದು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಕಾರನ್ನು ಪರಿಶೀಲಿಸಿದ ಪೊಲೀಸರು ನಗದು ವಶಕ್ಕೆ ಪಡೆದಿದ್ದಾರೆ. ನಗದು ವಶಪಡಿಸಿರುವ ಬಗ್ಗೆ ಪೊಲೀಸರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಚುನಾವಣಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇಂಡಿಕಾ ಕಾರಿನಲ್ಲಿ 20 ಲಕ್ಷ ರೂ. ಪತ್ತೆ
RELATED ARTICLES