Site icon PowerTV

ಮಂಡ್ಯದಲ್ಲಿ ಯಾವ ಡ್ರಾಮಾನೂ ನಡೆಯಲ್ಲ: ಸಿಎಂ

ಉಡುಪಿ: ಅಂಬರೀಶ್ ದೇಹಕ್ಕೆ ಅಗ್ನಿ ಸ್ಪರ್ಶ ಆದ ಕೂಡಲೇ ರಾಜಕೀಯ ಆರಂಭವಾಗಿದೆ. ಮಂಡ್ಯದಲ್ಲಿ ಜೆಡಿಎಸ್ ನಿರ್ಣಾಮ ಮಾಡಲು ಹೊರಟಿದ್ದಾರೆ. ಯಾರ ಡ್ರಾಮನೂ ಮಂಡ್ಯದಲ್ಲಿ ನಡೆಯೋದಿಲ್ಲ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಕಾಂಗ್ರೆಸ್-ಜೆಡಿಎಸ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಅಂಬರೀಶ್ ದೇಹಕ್ಕೆ ಅಗ್ನಿ ಸ್ಪರ್ಶ ಆದ ಕೂಡಲೇ ರಾಜಕೀಯ ಆರಂಭವಾಗಿದೆ. ಚೆಲುವರಾಯ ಸ್ವಾಮಿ ಬಗ್ಗೆ ಮಾತೇ ಆಡಿಲ್ಲ. ಬೆನ್ನಿಗೆ ಚೂರಿ ಹಾಕುವವರ ಬಗ್ಗೆ ಮಾತನಾಡಿದ್ದೆ. ಚೆಲುವರಾಯಸ್ವಾಮಿ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ ಹೇಳಿಲ್ಲ. ನನ್ನ 8 ಶಾಸಕರನ್ನು, ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ. ನಿಖಿಲ್​ ಅವರನ್ನು ಸೋಲಿಸಿ ನನ್ನನ್ನು ಮುಗಿಸಲು ಎಲ್ಲಾ ಪ್ರಯತ್ನಗಳೂ ನಡೆದಿದೆ. ಜೆಡಿಎಸ್ ಕುತಂತ್ರ ಮಾಡುತ್ತಿಲ್ಲ. ಮಂಡ್ಯದಲ್ಲಿ ಸ್ಟ್ರಾಟಜಿ ಮಾಡಿ ಚುನಾವಣೆ ಮಾಡುವ ಅಗತ್ಯ ಇಲ್ಲ. ಮಂಡ್ಯ ಜಿಲ್ಲೆ ನಮ್ಮ ಹೃದಯ ಇದ್ದಂತೆ. ಮಂಡ್ಯದ ನಾಡಿಮಿಡಿತ ನಮಗೆ ಗೊತ್ತಿದೆ. ” ಅಂತ ಹೇಳಿದ್ರು.

ರೈತರು ಸತ್ತಾಗ ಯಾರೂ ಬಂದಿಲ್ಲ. ಕಂಪೌಂಡ್ ಕಟ್ಟಿಸಿದ್ರೆ ಅದು ಅಭಿವೃದ್ಧಿ ಆಗಲ್ಲಾ ಅಂತ ಸುಮಲತಾ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. “ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ. ನಾವು ಎಲ್ಲಾ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version