Site icon PowerTV

13 ನಕಲಿ ಮತದಾರರು ವಶಕ್ಕೆ

ಯಲಹಂಕ: ರಾಜ್ಯದ ಹಲವು ಕಡೆ ಬಿರುಸಿನ ಮತದಾನ ನಡೆಯುತ್ತಿದ್ದು, ಯಲಹಂಕದಲ್ಲಿ 13 ನಕಲಿ ಮತದಾರರು ಹಕ್ಕು ಚಲಾವಣೆಗೆ ಪ್ರಯತ್ನಿಸಿದ್ದಾರೆ.

ಕಾಮಾಕ್ಷಮ್ಮ ಬಡವಣೆಯ ಬೂತ್​​ನಲ್ಲಿ ನಕಲಿ ಮತದಾರರು ಹಕ್ಕು ಚಲಾಯಿಸಲು ಪ್ರಯತ್ನಿಸಿದ್ದಾರೆ. ಚುನಾವಣಾಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದು ಆರಂಭದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಮೂವರನ್ನು ವಶಕ್ಕೆ ಪಡೆಯುತ್ತಿದ್ದಂತೆ 10 ಮಂದಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಸಹಾಯಕ ಚುನಾವಣಾಧಿಕಾರಿ ಎಲ್.ಸಿ. ನಾಗರಾಜು ನೇತೃತ್ವದಲ್ಲಿ ದಾಳಿ ನಡೆಸಿದ್ದು 13 ಜನ ನಕಲಿ ಮತದಾರರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಯಲಹಂಕ ಪೊಲೀಸ್​ ಠಾಣೆಯಲ್ಲಿ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.

Exit mobile version