Site icon PowerTV

ಶಾಸಕರ ಮನೆಯಲ್ಲೇ ಕಳ್ಳತನ..!

ಚಿತ್ರದುರ್ಗ: ಕೂಡ್ಲಗಿ ಶಾಸಕ ಎನ್.ವೈ.ಗೋಪಾಲ ಕೃಷ್ಣ ನಿವಾಸದಲ್ಲಿ ಕಳ್ಳತನ ನಡೆದಿದೆ. ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯಲ್ಲಿರುವ ಶಾಸಕರ ನಿವಾಸಕ್ಕೆ ಯಾರೂ ಇಲ್ಲದ ವೇಳೆ ಕಳ್ಳರು ಕನ್ನ ಹಾಕಿದ್ದಾರೆ. ಸಾವಿರಾರು ರೂ. ಮೌಲ್ಯದ ವಸ್ತುಗಳು, ನಗದು ಕಳ್ಳತನವಾಗಿದೆ. ಶಾಸಕ ಎನ್.ವೈ.ಗೋಪಾಲ ಕೃಷ್ಣ ನಿವಾಸದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳ್ಳರು ಕೈಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಕೋಟೆ ಠಾಣೆ ಸಿಪಿಐ ಪ್ರಕಾಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version