ಭಾರತದ ಮಾಜಿ ಕ್ರಿಕೆಟಿಗ, 2011ರ ವರ್ಲ್ಡ್ಕಪ್ ಹೀರೋ ಗೌತಮ್ ಗಂಭೀರ್ ಮತ್ತು 2008ರ ಬೀಜಿಂಗ್ ಒಲಂಪಿಕ್ನ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
ಗೌತಮ್ ಗಂಭೀರ್ ಅವರು ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ, ವಿಜೇಂದರ್ ಸಿಂಗ್ ದೆಹಲಿ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಗೌತಮ್ ಗಂಭೀರ್ ಇತ್ತೀಚೆಗಷ್ಟೇ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದರು. ಅವರಿಗೆ ಬಿಜೆಪಿ ಪೂರ್ವ ದೆಹಲಿ ಕ್ಷೇತ್ರದಿಂದ ಟಿಕೆಟ್ ನೀಡಿದೆ.
ಇನ್ನು ಕಾಂಗ್ರೆಸ್ ವಿಜೇಂದರ್ ಸಿಂಗ್ ಅವರನ್ನು ದೆಹಲಿ ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಜೇಂದರ್ ಅವರ ಹರಿಯಾಣದಲ್ಲಿನ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯ ಹಾಲಿ ಸಂಸದ ರಮೇಶ್ ಬಿಧೂರಿ ಅವರ ವಿರುದ್ಧ ಅಖಾಡಕ್ಕೆ ಇಳಿದಿದ್ದಾರೆ.
