Site icon PowerTV

‘ಲೋಕ’ ಲೆಕ್ಕಾಚಾರ – ದೆಹಲಿಯಲ್ಲಿ ಕಾಂಗ್ರೆಸ್ ಸಭೆ

ನವದೆಹಲಿ: ಇಂದು ಬೆಳಗ್ಗೆ 11ಗಂಟೆಗೆ ನವದೆಹಲಿಯಲ್ಲಿ ಕಾಂಗ್ರೆಸ್​ ಸಭೆ ನಡೆಯಲಿದ್ದು, ಪಕ್ಷದ ಮುಖಂಡರು ಲೋಕಸಭಾ ಚುನಾವಣೆ ಸೋಲು-ಗೆಲುವಿನ ಲೆಕ್ಕಾಚಾರ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಚರ್ಚೆ ನಡೆಯಲಿದ್ದು, ಕಾಂಗ್ರೆಸ್‌ ಆಡಳಿತವಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಪಿಸಿಸಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಭೆಯ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಲಿದ್ದು, ಲೋಕಸಭಾ ಫಲಿತಾಂಶದ ನಂತರದ ನಿಲುವುಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

Exit mobile version