ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ.
ಟ್ವೀಟರ್ನಲ್ಲಿ ಸಕ್ರಿಯ ಆಗಿರೋ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಬಿಎಸ್ವೈಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದರ ಬಗ್ಗೆ ಸಲಹೆ ನೀಡಿದ್ದಾರೆ.
”ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ” ಅಂತ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
