Site icon PowerTV

ಮೈತ್ರಿಗೆ ಶಾಕ್ : ಶಾಸಕ ಆನಂದ್​ ಸಿಂಗ್ ರಾಜೀನಾಮೆ..!

ಬೆಂಗಳೂರು : ವಿಜಯನಗರ ಶಾಸಕ ಆನಂದ್​ ಸಿಂಗ್​ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಮೈತ್ರಿ ಸರ್ಕಾರ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದೆ.
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಮೆರಿಕಾಕ್ಕೆ ತೆರಳಿದ ಬೆನ್ನಲ್ಲೇ ಮೈತ್ರಿ ಸರ್ಕಾರ ಮತ್ತೆ ಅಲುಗಾಡಲಾರಂಭಿಸಿದೆ..! ರಾಜ್ಯ ರಾಜಕೀಯದಲ್ಲೀ ಭಿನ್ನಮತೀಯರ ಹೊಸ ಆಟ ಶುರುವಾಗಿದೆ. ಅತೃಪ್ತ ಶಾಸಕರ ದಿಢೀರ್ ರಾಜೀನಾಮೆ ಪರ್ವ ಆರಂಭವಾಗಿದೆ. ವಿಜಯನಗರ ಶಾಸಕ ಆನಂದ್​ ಸಿಂಗ್​ ಅವರ ರಾಜೀನಾಮೆ ಬೆನ್ನಲ್ಲೇ ಇನ್ನೂ 11 ಶಾಸಕರು ರಾಜೀನಾಮೆ ನೀಡಲಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬಂದಿವೆ.
ಆನಂದ್ ಸಿಂಗ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ನಿವಾಸಕ್ಕೆ ತೆರಳಿ ಆನಂದ್​ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ರಮೇಶ್ ಕುಮಾರ್ ಅವರು ತಮ್ಮ ಕೈಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಅಂದಿದ್ದಾರೆ.

Exit mobile version