ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪರ್ವ ಜೋರಾಗಿದೆ. ಇಂದು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ‘ಮೈತ್ರಿ’ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.
ಇತ್ತೀಚೆಗಷ್ಟೇ ನಾಗೇಶ್ ಅವರು ಸಚಿವ ಸ್ಥಾನವನ್ನು ಅಲಂಕರಿಸಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಖಾತೆ ನೀಡಲು ತುಂಬಾ ಸತಾಯಿಸಿದ್ದರು. ಒಂದು ವಾರದ ಬಳಿಕ ಅವರಿಗೆ ಸಣ್ಣ ಕೈಗಾರಿಕಾ ಖಾತೆ ನೀಡಲಾಗಿತ್ತು. ಕೇವಲ 20 ದಿನಗಳ ಹಿಂದಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ನಾಗೇಶ್ ಅವರು ರಾಜೀನಾಮೆ ನೀಡುವ ಮೂಲಕ ‘ಮೈತ್ರಿ’ ಪತನಕ್ಕೆ ಮುನ್ನುಡಿ ಬರೆದಿದ್ದಾರೆ.
