ನವದೆಹಲಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ 150 ಕಿಲೋಮೀಟರ್ ಪಾದಯಾತ್ರೆ ಮಾಡಿ ಅಂತ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಕರೆ ನೀಡಿದ್ದಾರೆ.
ಅಕ್ಟೋಬರ್ 2ರಿಂದ 31ರವರೆಗೆ ನಿತ್ಯ 15 ಕಿ.ಮೀ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿ. ಈ ಮೂಲಕ ಮಹಾತ್ಮಾ ಗಾಂಧೀಜಿ ಹಾಗೂ ವಲ್ಲಭಬಾಯಿ ಪಟೇಲರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ. ರಾಜ್ಯಸಭಾ ಸದಸ್ಯರೂ ಕೂಡ ಪಾದಯಾತ್ರೆಯಲ್ಲಿ ಭಾಗವಹಿಸಿ, ಬಿಜೆಪಿ ಸಂಘಟನೆ ದುರ್ಬಲವಾಗಿರುವ ಕ್ಷೇತ್ರಗಳಲ್ಲಿ ಸಂಚರಿಸಬೇಕು ಅಂತ ಮೋದಿ ಸೂಚಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.