Site icon PowerTV

ಜೆಡಿಎಸ್​​​​ ಜೊತೆ ಹೋಗೋ ಪ್ರಶ್ನೆಯೇ ಇಲ್ಲ : ಬಿಎಸ್​ವೈ

ನಿನ್ನೆ ಜೆಡಿಎಸ್ ನಾಯಕರು ಹಾಗೂ ಬಿಜೆಪಿ ನಾಯಕರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಭೇಟಿಯಾಗಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಸೇರಿಕೊಂಡು ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳೋಕೆ ರಣತಂತ್ರಗಳನ್ನು ರೂಪಿಸುತ್ತಿವೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಇದೀಗ ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್​ ಜೊತೆ ಹೋಗುವ ಪ್ರಶ್ನೆಯೇ ಇಲ್ಲ. ಸುಪ್ರೀಂ ಕೋರ್ಟ್ ತೀರ್ಪನ್ನು ಕಾದು ನೋಡೋಣ ಎಂದಿದ್ದಾರೆ.
ಇದೆಲ್ಲಾ ರಾಜಕೀಯ, ನಾನು ಈಗಾಗಲೇ ಇದನ್ನು ಅನುಭವಿಸಿದ್ದೇನೆ. ಆಕಸ್ಮಿಕ ಭೇಟಿಯನ್ನು ಟ್ವಿಸ್ಟ್​​​ ಮಾಡೋದು ಸರಿಯಲ್ಲ. ಸಾ. ರಾ ಮಹೇಶ್ ಬಿಜೆಪಿ ನಾಯಕರ ಭೇಟಿ ಕೇವಲ ಆಕಸ್ಮಿಕ ಎಂದಿದ್ದಾರೆ.

Exit mobile version