Site icon PowerTV

ಬಿಜೆಪಿ ಸರ್ಕಾರ ರಚನೆ ಮಾಡುತ್ತೆ, ಬಿಎಸ್​​ವೈ ಸಿಎಂ ಆಗ್ತಾರೆ : ಕೋಟ ಶ್ರೀನಿವಾಸ ಪೂಜಾರಿ

ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸಾ.ರಾ ಮಹೇಶ್ ಹಾಗೂ ಈಶ್ವರಪ್ಪ ಭೇಟಿಯಾಗಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ವಿಚಾರವಾಗಿ ಮಾತನಾಡಿದ್ದಾರೆ ಅನ್ನೋ ಬಗ್ಗೆ ಒಂದಷ್ಟು ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಜೆಡಿಎಸ್ ಜೊತೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯೇ ಸರ್ಕಾರ ರಚನೆ ಮಾಡುತ್ತೆ. ಬಿ.ಎಸ್. ಯಡಿಯೂರಪ್ಪನವರೇ ಸಿಎಂ ಆಗ್ತಾರೆ ಎಂದಿದ್ದಾರೆ. ಮೈತ್ರಿ ಸರ್ಕಾರ ಈಗಾಗಲೇ ಬಹುಮತ ಕಳಎದುಕೊಂಡಾಗಿದೆ. ಸಭೆ ಮಾಡಿ ಮುಂದಿನ ನಡೆಯ ಬಗ್ಗೆ ತೀರ್ಮಾನ ತೆಗೆದುಕೊಳ್ತೀವಿ ಅಂತಾ ಹೇಳಿದ್ದಾರೆ.

Exit mobile version