Site icon PowerTV

ಯೂಥ್‌ ಕಾಂಗ್ರೆಸ್‌ ಕಾರ್ಯಕರ್ತರಿಂದ ಸುಪ್ರೀಂಗೆ ಅರ್ಜಿ

ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸುವಂತೆ  400 ಮಂದಿ ಯೂಥ್‌ ಕಾಂಗ್ರೆಸ್‌ ಕಾರ್ಯಕರ್ತರು ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕಾರ್ಯಕರ್ತರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸೋದಕ್ಕೆ ಸುಪ್ರೀಂ ಕೋರ್ಟ್ ಅಸ್ತು ಅಂದಿದೆ. ಅನಿಲ್ ಚಾಕೊ ಜೋಸೆಫ್ ಮತ್ತು ಇತರೆ ಕಾರ್ಯಕರ್ತರು ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿಯಲ್ಲಿ ಹಣದ ಆಮಿಷದಿಂದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರೋದ್ರಿಂದ ಇವರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಮನವಿಯನ್ನು ಮಾಡಿದ್ದಾರೆ.

Exit mobile version