Site icon PowerTV

14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್..!

ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿದ್ದ 14 ಶಾಸಕರನ್ನು ಸ್ಪೀಕರ್ ರಮೇಶ್​​ ಕುಮಾರ್​ ಇಂದು ಅನರ್ಹಗೊಳಿಸಿದ್ದಾರೆ. ಈ ಹಿಂದೆ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದರು. ಇದರೊಂದಿಗೆ 17 ಅತೃಪ್ತ ಶಾಸಕರು ಅನರ್ಹಗೊಂಡಂತಾಗಿದೆ.
ಇಂದು ಬೆಳಗ್ಗೆ 11.30ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ ರಮೇಶ್​ಕುಮಾರ್​, ಮೈತ್ರಿ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡಿದ್ದ ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವುದಾಗಿ ತಿಳಿಸಿದರು.
ಜುಲೈ 25ರಂದು ಗೋಕಾಕ್​ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ, ರಾಣೆಬೆನ್ನೂರು ಶಾಸಕ (ಕೆಪಿಜೆಪಿ) ಆರ್, ಶಂಕರ್‌ ಅವರನ್ನು ಅನರ್ಹಗೊಳಿಸಿದ್ದರು. ಇಂದು ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

Exit mobile version