Site icon PowerTV

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ

ನವದೆಹಲಿ : ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಇಂದು ವಿಧಿವಶರಾಗಿದ್ದಾರೆ. 

ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಿಸದೇ ಸುಷ್ಮಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ದೇಶದ ರಾಜಕಾರಣ ಕಂಡ ಧೀಮಂತ ನಾಯಕಿಯರಲ್ಲಿ ಒಬ್ಬರಾಗಿದ್ದ ಸುಷ್ಮಾ ಸ್ವರಾಜ್, 7 ಬಾರಿ ಸಂಸದರಾಗಿ, 3 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ದೆಹಲಿ ಸಿಎಂ ಆಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

‘ನಾನು ಜೀವನವಿಡಿ ಈ ದಿನಕ್ಕೆ ಕಾಯ್ತಿದ್ದೆ’ : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್..!

Exit mobile version