SIIMA 2019 ಅವಾರ್ಡ್ ಪ್ರದಾನ ಮಾಡಲಾಗಿದ್ದು, ರಾಕಿಂಗ್ ಸ್ಟಾರ್ ಯಶ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೆಜಿಎಫ್ ಸಿನಿಮಾದ ರಾಕಿಭಾಯ್ ಪಾತ್ರಕ್ಕೆ ಯಶ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಟಗರು ಸಿನಿಮಾದ ಡಾಲಿ ಪಾತ್ರಕ್ಕಾಗಿ ನಟ ಧನಂಜಯ್ ಅತ್ಯುತ್ತಮ ಖಳನಟ ಪ್ರಶಸ್ತಿ ಪಡೆದಿದ್ದಾರೆ.
ಕತಾರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈಮಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಯಶ್, ಧನಂಜಯ್ ಅವರಲ್ಲದೆ ಕೆಜಿಎಫ್ ಸಿನಿಮಾದ ನಿರ್ದೆಶನಕ್ಕಾಗಿ ಡೈರೆಕ್ಟರ್ ಪ್ರಶಾಂತ್ ನೀಲ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ. ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಕಾಶ್ ತುಮಿನಾಡ್ ಅತ್ಯುತ್ತಮ ಹಾಸ್ಯ ನಟ ಪ್ರಶಸ್ತಿ ಪಡೆದಿದ್ದಾರೆ.
