Site icon PowerTV

ಹಿರಿಯ ವಕೀಲ ರಾಮ್​ ಜೇಠ್ಮಲಾನಿ ವಿಧಿವಶ

ನವದೆಹಲಿ: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ರಾಮ್ ಜೇಠ್ಮಲಾನಿ ಅವರು ಇಂದು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮ್ ಜೇಠ್ಮಲಾನಿ ಇಂದು ಬೆಳಗ್ಗೆ ದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ರಾಮ್ ಜೇಠ್ಮಲಾನಿ ಅವರು ಸುಪ್ರೀಂ ಕೋರ್ಟಿನ ಹಿರಿಯ ವಕೀಲರಾಗಿದ್ದರು. ದೇಶದ ಖ್ಯಾತ ಕ್ರಿಮಿನಲ್ ವಕೀಲರಲ್ಲಿ ಇವರು ಕೂಡ ಒಬ್ಬರು. 7 ದಶಕಗಳ ಕಾಲ ವಕೀಲರಾಗಿ ರಾಮ್ ಜೇಠ್ಮಲಾನಿ ಸೇವೆ ಸಲ್ಲಿಸಿದ್ಧಾರೆ. ವಾಜಪೇಯಿ ಸರ್ಕಾರದ ಅವಧಿಯಲ್ಲಿ ಕಾನೂನು ಸಚಿವರಾಗಿಯೂ ಸೇವೆ ಸಲ್ಲಿಸಿದ್ರು,  ಇವರಿಗೆ 96 ವರ್ಷ ವಯಸ್ಸಾಗಿತ್ತು.

Exit mobile version