Saturday, August 30, 2025
HomeUncategorized75ನೇ ವರ್ಷದ ಮಹಾ ಗಣೇಶೋತ್ಸವಕ್ಕೆ ಪೊಲೀಸ್ ಕಣ್ಗಾವಲು..!

75ನೇ ವರ್ಷದ ಮಹಾ ಗಣೇಶೋತ್ಸವಕ್ಕೆ ಪೊಲೀಸ್ ಕಣ್ಗಾವಲು..!

ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಎಸ್​​​​ಪಿ ಕೆ.ಎಂ.ಶಾಂತರಾಜು ಹೇಳಿದ್ದಾರೆ.
ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 75ನೇ ವರ್ಷದ ಗಣೇಶೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ವಿಶೇಷ ಕಣ್ಗಾವಲು ಪಡೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಬ್ಬರು ಎಸ್ಪಿ, ಮೂವರು ಎಸ್.ಪಿ., 16 ಡಿವೈಎಸ್ಪಿ, 51 ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್, 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ 1 ಆರ್.ಎ.ಎಫ್ ತುಕಡಿ, 14 ಕೆ.ಎಸ್.ಆರ್.ಪಿ. ತುಕಡಿ, 13 ಡಿ.ಎ.ಆರ್. ಮತ್ತು 2 ಅಗ್ನಿ ವರ್ಷ, 2 ಎ.ಎನ್.ಎಸ್. ತಂಡ, ದಿವ್ಯದೃಷ್ಟಿ ವಾಹನ, ಅಗ್ನಿಶಾಮಕದಳದ ಸಿಬ್ಭಂದಿ ಸೇರಿದಂತೆ, ಸುಮಾರು 400 ಸಿಸಿಟಿವಿ ಕ್ಯಾಮೆರಾ, 3 ವಿಶೇಷ ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಿದ್ದು, ತೀವ್ರ ಕಣ್ಗಾವಲು ಇರಿಸಲಾಗಿದೆ ಅಂದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ, ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಸುಮಾರು 700 ಜನರನ್ನು ಗುರುತಿಸಿ ವಿಚಾರಣೆ ನಡೆಸಿ ಹಲವರ ವಿರುದ್ದ ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ ತೆಗೆದುಕೊಳ್ಳಲಾಗಿದ್ದು, 8 ಜನರನ್ನು ಗಡಿಪಾರು ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರದ ನಾಲ್ಕು ಕಡೆಗಳಲ್ಲಿ ವಾಹನ ತಪಾಸಣೆ ನಡೆಸಲಾಗುವುದು, ಈಗಾಗಲೇ ಮೆರವಣಿಗೆಯ ಮಾರ್ಗದುದ್ದಕ್ಕೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅನಗತ್ಯವಾಗಿ ಘೋಷಣೆ ಕೂಗುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು, ಮತ್ತು ಸಂಶಯಸ್ಪದ ವಸ್ತುಗಳನ್ನು ಹಿಡಿದು ಓಡಾಡುವವರ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ, ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಅಂತ ಹೇಳಿದರು.
ಅಲ್ಲದೇ, ಇಂದು ಸಂಜೆಯಿಂದ 13 ರ ರಾತ್ರಿ 9 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ, ಆದೇಶ ಹೊರಡಿಸಲಾಗಿದ್ದು, ಯಾವುದೇ, ಅಹಿತಕರ ಘಟನೆ ನಡೆಯದಂತೆ, ಕಟ್ಟೆಚ್ಚರ ವಹಿಸಲಾಗಿದೆ. ಒಟ್ಟಾರೆ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ಅಗತ್ಯ ಬಿಗಿ ಬಂದೋಬಸ್ತ್ ಮಾಡಲಾಗಿದೆ ಅಂತ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments