Site icon PowerTV

ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಡೇಟ್ ಫಿಕ್ಸ್..!

ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. 15 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್ 21ರಂದು ಎಲೆಕ್ಷನ್ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ.
ವಿಜಯನಗರ ಮತ್ತು ರಾಣೆ ಬೆನ್ನೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಘೋಷಣೆ ಮಾಡಿಲ್ಲ. ಈ ಎರಡು ಕ್ಷೇತ್ರಗಳನ್ನು ಹೊರತು ಪಡಿಸಿ ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ರಾಜೇಶ್ವರಿನಗರ, ಯಶವಂತಪುರ, ಕೆ.ಆರ್ ಪುರ, ಹೊಸಕೋಟೆ, ಚಿಕ್ಕಬಳ್ಳಾಪುರ, ಹಿರೇಕೇರೂರು, ಹುಣಸೂರು, ಕೆ.ಆರ್ ಪೇಟೆ, ಮಸ್ಕಿ, ಗೋಕಾಕ್​, ಅಥಣಿ, ಕಾಗವಾಡ, ಯಲ್ಲಾಪುರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿಜಯ ನಗರ ಮತ್ತು ರಾಣೆಬೆನ್ನೂರು ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿಲ್ಲ.

Exit mobile version