ಸುಪ್ರೀಂಕೋರ್ಟ್ನ ಅಭಯದ ಬಳಿಕವೂ ಅನರ್ಹ ಶಾಸಕರಿಗೆ ಮತ್ತೆ ಶಾಕ್ ಆಗಿದೆ. 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪಚುನವಣೆ ನಡೆಯಲಿದೆ. ಇಂದು ಚುನಾವಣಾ ದಿನಾಂಕವನ್ನು ಮರು ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ನವೆಂಬರ್ 11ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನವೆಂಬರ್ 18ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನವೆಂಬರ್ 21ಕ್ಕೆ ನಾಮಪತ್ರ ವಾಪಸ್ಗೆ ಕೊನೇ ದಿನವಾಗಿದೆ. ಡಿಸೆಂಬರ್ 9ರಂದು ಫಲಿತಾಂಶ ಹೊರ ಬೀಳಲಿದೆ. ಡಿಸೆಂಬರ್ 11ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ.
ಈ ಹಿಂದೆ ಅಕ್ಟೋಬರ್ 21ಕ್ಕೆ ಚುನಾವಣೆ ಘೋಷಣೆಯಾಗಿತ್ತು. ಆದರೆ, ಅನರ್ಹ ಶಾಸಕರ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿತ್ತು. ಬಳಿಕ ಚುನಾವಣಾ ಆಯೋಗ ಚುನಾವಣೆಯನ್ನು ಮುಂದೂಡಿತ್ತು.
