Site icon PowerTV

ಚಂದನ್ ಶೆಟ್ಟಿ -ನಿವೇದಿತಾ ಗೌಡ ವಿರುದ್ಧ ದೂರುಗಳ ಸರಮಾಲೆ..!

ಮೈಸೂರು : ಯುವ ದಸರಾ ವೇದಿಕೆಯಲ್ಲಿ ತಾವು ಮದುವೆಯಾಗುವುದಾಗಿ ಘೋಷಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿರುದ್ಧ ದೂರುಗಳ ಮೇಲೆ ದೂರುಗಳು ದಾಖಲಾಗುತ್ತಿವೆ. ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಮೂರು ದೂರುಗಳು ದಾಖಲಾಗಿವೆ.
ಮೈಸೂರು ಯೂತ್ ಕಾಂಗ್ರೆಸ್, ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರವರು ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲಿಸಿದ್ದಾರೆ.
ಶುಕ್ರವಾರ ನಡೆದ ಯುವ ದಸರಾದಲ್ಲಿ ರ‍್ಯಾಪರ್ ಚಂದನ್ ಶೆಟ್ಟಿ ನಿವೇದಿತಾ ಗೌಡಗೆ ಪ್ರಪೋಸ್ ಮಾಡಿ, ಮದುವೆ ಆಗುವುದಾಗಿ ಘೋಷಿಸಿದ್ದರು. ವ್ಯಾಪಕ ಟೀಕೆಗಳು ಕೇಳಿ ಬರುತ್ತಿದ್ದಂತೆ ಈ ಸಂಬಂಧ ಪ್ರತಿಕ್ರಿಯೆ ನೀಡಿದ ರ‍್ಯಾಪರ್ ಚಂದನ್ ಶೆಟ್ಟಿ, ಕ್ಷಮೆ ಯಾಚಿಸಿದ್ದಾರೆ.

Exit mobile version