Site icon PowerTV

ಐಟಿ ದಾಳಿ ಬೆನ್ನಲ್ಲೇ ಪರಮೇಶ್ವರ್ ಆಪ್ತ ಸಹಾಯಕ  ರಮೇಶ್ ಆತ್ಮಹತ್ಯೆ

ಬೆಂಗಳೂರು :  ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ಆದ ಬೆನ್ನಲ್ಲೆ ಪರಮೇಶ್ವರ್ ಅವರ ಆಪ್ತ ರಮೇಶ್ ಅವರು ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹಲವು ವರ್ಷಗಳಿಂದ ರಮೇಶ್ ಅವರು ಪರಮೇಶ್ವರ್ ಗೆ ಆಪ್ತರಾಗಿದ್ದ ರಮೇಶ್ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಗ್ರೌಂಡ್ರ್‌ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ದೇಹ ಪತ್ತೆ ಆಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು. ತನಿಖೆ ಆರಂಭಿಸಿದ್ದಾರೆ.

ಇಂದು ಬೆಳಿಗ್ಗೆ ಹಲವರಿಗೆ ಕರೆ ಮಾಡಿದ್ದ ರಮೇಶ್ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಅನ್ನು ಸ್ವಿಚ್‌ ಆಫ್ ಮಾಡಿದ್ದರು. ನಂತರ  ರಮೇಶ್ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು, ಆದರೆ ಐಟಿ ಅಧಿಕಾರಿಗಳಿಂದ ತೀವ್ರ ವಿಚಾರಣೆಗೆ ಒಳಪಟ್ಟ ಬೆನ್ನಲ್ಲೇ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎನ್ನಲಾಗುತ್ತಿದೆ.

Exit mobile version