ನವದೆಹಲಿ : ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ.ಸಿ ರಾಮಮೂರ್ತಿ ಸಂಸದ ಸ್ಥಾನ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿಯಾಗಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ತಾನು ಸಂಸದ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಅಂದಿದ್ದಾರೆ.