ಬೆಂಗಳೂರು : ಶಾಸಕ ಭೈರತಿ ಸುರೇಶ್ ಹತ್ಯೆಗೆ ಯತ್ನ ನಡೆದಿದ್ದು, ಆರೋಪಿ ಶಿವು ಎಂಬಾತನನ್ನು ಕೊತ್ತನೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭೈರತಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುರೇಶ್ ಮನೆಯಿಂದ ಹೊರಡುವಾಗ ಸ್ವಗ್ರಾಮದ ಶಿವು ಎಂಬಾತ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.
ಅನರ್ಹ ಶಾಸಕ ಭೈರತಿ ಬಸವರಾಜ್ ಅವರ ಸಹೋದರ ಸುರೇಶ್ ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರಲ್ಲೊಬ್ಬರು. ಇನ್ನು ಆರೋಪಿ ಶಿವು ಕಾರ್ಪೆಂಟರ್ ಎನ್ನಲಾಗಿದ್ದು, ಕೊತ್ತನೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
