Site icon PowerTV

ನಿವೃತ್ತ ಲೋಕಾಯುಕ್ತ ನ್ಯಾ. ವೆಂಕಟಾಚಲ ವಿಧಿವಶ

ಬೆಂಗಳೂರು : ನಿವೃತ್ತ ಲೋಕಾಯುಕ್ತ ನ್ಯಾ. ವೆಂಕಟಾಚಲ (89) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ಹೋಗುವ ಮುನ್ನವೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದ ನಂಜೇಗೌಡ ವೆಂಕಟಾಚಲರವರು ಜನಿಸಿದ್ದು 1930 ಜುಲೈ 3ರಂದು. ಮೈಸೂರು ವಿವಿಯಲ್ಲಿ ಕಾನೂನು ಪದವಿ ಪೂರೈಸಿದ್ದ ಅವರು, ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದರು. 2001-2006ರಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿದ್ದ ಇವರು ನಾಲ್ಕುವರೆ ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಬರೋಬ್ಬರಿ 50 ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಭ್ರಷ್ಟರಿಗೆ ಸಿಂಹಸ್ವಪ್ನವಾಗಿ ಕಾಡಿ, ಲೋಕಾಯುಕ್ತ ಸ್ವಾಯತ್ತ ಸಂಸ್ಥೆಯ ಘನತೆಯನ್ನು ಹೆಚ್ಚಿಸಿದ್ರು.

Exit mobile version