Site icon PowerTV

ಮುಂದಿನ 20 ವರ್ಷ ಪಿಎಂ ಆಗಿರಲು ಮೋದಿ ತಂತ್ರ : ಕಾಗೋಡು ತಿಮ್ಮಪ್ಪ

ಶಿವಮೊಗ್ಗ : ಭಾರತದಿಂದ ಮುಸ್ಲಿಂರನ್ನು ಖಾಲಿ ಮಾಡಿಸಿದರೆ ಮುಂದಿನ 20 ವರ್ಷ ಪ್ರಧಾನಿ ಆಗಿರಬಹುದು ಎಂಬುದು‌ ಮೋದಿಯ ಉದ್ದೇಶವಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಏಕ ಪೌರತ್ವ ನೀತಿಯನ್ನು ಜಾರಿಗೆ ತರುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ರಾಷ್ಟ್ರದ ಪ್ರಜಾತಂತ್ರ ವ್ಯವಸ್ಥೆಯನ್ನು ಒಡೆಯಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ನಾವೆಲ್ಲರು ಮೋದಿಗೆ ತಕ್ಕ ಪಾಠ  ಕಲಿಸದಿದ್ದರೆ ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಗುಡುಗಿದರು.  ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್​ ಹೋರಾಟ ಮಾಡಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿಯನ್ನು ಹೊರ ಹಾಕಿಯೇ ತೀರಬೇಕು. ಮೋದಿಯ ತಲೆ ತುಂಬಾ  ಮುಸ್ಲಿಂ ವಿರೋಧಿ ನಿಲುವು ತುಂಬಿಕೊಂಡಿದೆ. ಹೀಗಾಗಿ ಇಂತಹ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದಾರೆ. ಪ್ರತಿಭಟಿಸಿದವರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. 

Exit mobile version