Site icon PowerTV

ರೇಣುಕಾಚಾರ್ಯನನ್ನು ತರಾಟೆಗೆ ತೆಗೆದುಕೊಂಡ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸಾಮಾಜಿಕ ಅಂತರವನ್ನು ಕಾಯದೇ ಸಭೆ ನಡೆಸಿದ ವಿಚಾರವಾಗಿ ರೇಣುಕಾಚಾರ್ಯ ಅವರನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.

ರೇಣುಕಾಚಾರ್ಯ ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿದ್ದರು. ಆದರೆ ಸಭೆ ನಡೆಸುವಾಗ ಅವರು ಯಾವುದೇ ರೀತಿಯ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಈ ಸಭೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದ್ದಂತೆ ರೇಣುಕಾಚಾರ್ಯ ಅವರಿಗೆ ಯಡಿಯೂರಪ್ಪ ಕರೆ ಮಾಡಿ, ಏನು ಮಾಡುತ್ತಿದ್ದೀಯಾ ನೀನು? ಯಾಕೆ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ? ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Exit mobile version