Tuesday, September 16, 2025
HomeUncategorizedದೇಶದಲ್ಲಿ ಮೊದಲ ಬಾರಿಗೆ 8 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೋನಾ ಪಾಸಿಟಿವ್ : 5 ಸಾವಿರದ ಗಡಿ...

ದೇಶದಲ್ಲಿ ಮೊದಲ ಬಾರಿಗೆ 8 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೋನಾ ಪಾಸಿಟಿವ್ : 5 ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ 

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ 8 ಸಾವಿರಕ್ಕಿಂತ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 8,380 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ 1,82,143 ಜನರಲ್ಲಿ ಸೋಂಕು ಪತ್ತೆಯಾಗಿದೆ.  ಇನ್ನು ನಿನ್ನೆಯಿಂದ ಇಂದಿಗೆ 193 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವನಪ್ಪಿದವರ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ಇವೆಲ್ಲದರ ನಡುವೆ 86,984 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 65,168 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,940 ಜನರು ಸೋಂಕಿಗೆ ತುತ್ತಾಗಿದ್ದಾರೆ. ಈವರೆಗೂ ಮಹಾರಾಷ್ಟ್ರದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 2 ಸಾವಿರದ ಗಡಿ ದಾಟಿದೆ. ಇದರ ನಡುವೆ 28,081 ರಷ್ಟು ಮಂದಿ ಸೋಂಕಿತರು ಕೊರೋನಾದಿಂದ ಗುಣಮುಖರಾಗಿದ್ದಾರೆ.

ಇನ್ನು ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಕಳೆದ 24 ಗಂಟೆಯಲ್ಲಿ 938 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 21,184  ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆಯೂ 160  ಕ್ಕೆ ಏರಿಕೆಯಾಗಿದೆ. ಇದರೊಂದಿಗೆ12 ಸಾವರದಷ್ಟು ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆಯ ಏರಿಕೆಯಲ್ಲಿ ಗುಜರಾತ್ ಹಾಗೂ ದೆಹಲಿ ಮಧ್ಯೆ ಪೈಪೋಟಿ ನಡೆಯುವಂತಾಗಿದೆ. ದೆಹಲಿಯಲ್ಲಿ ಒಂದೇ ದಿನದಲ್ಲಿ 1,163 ರಷ್ಟು ಸೋಂಕಿತರು ಪತ್ತೆಯಾಗಿದ್ದು, ಒಟ್ಟು 18,549 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಏರಿಕೆಯಾಗಿದ್ದು, ಒಟ್ಟು 416 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಗುಜರಾತ್ ಮತ್ತೆ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದು, ದೆಹಲಿಯಲ್ಲಿ ಪತ್ತೆಯಾದ ಸೋಂಕಿತರಿಗಿಂತ ಸ್ವಲ್ಪ ಮಟ್ಟಿಗೆ  ಇಳಿಕೆ ಕಂಡಿದೆ. ಈವರೆಗೂ ಒಟ್ಟು 16,343 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಯಲ್ಲಿ  409 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಸೋಂಕಿನಿಂದ  ಸಾವನ್ನಪ್ಪಿದವರ ಸಂಖ್ಯೆಯೂ ಸಾವಿರದ ಗಡಿ ದಾಟಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments