Site icon PowerTV

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ‌ ಸರಕಾರಿ ಹಾಗೂ ಖಾಸಗಿ ಬಸ್ ವ್ಯವಸ್ಥೆ : ಜಿಲ್ಲಾಡಳಿತ ಸ್ಪಷ್ಟನೆ

ಗದಗ:  ರಾಜ್ಯಾದ್ಯಂತ ನಡೆಯಲಿರೋ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗದಗ ಜಿಲ್ಲೆಯಲ್ಲಿ ಸಿದ್ದತೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿನ 58 ಪರೀಕ್ಷಾ ಕೇಂದ್ರಗಳಲ್ಲಿ ನಂಬರ್ ಹಾಕುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

14210 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಲ್ಲಿ ಕಂಟೈನ್ಮೆಂಟ್ ಪ್ರದೇಶದ 31 ವಿದ್ಯಾರ್ಥಿಗಳೂ ಸೇರಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೆ N95 ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಪ್ರತೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಇತರೇ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ. ಕಂಟೈನ್ಮೆಂಟ್ ಪ್ರದೇಶದಿಂದ ಪ್ರತ್ಯೇಕ
ವಾಹನದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯ ಅನುಕೂಲಕ್ಕಾಗಿಯೇ 122 KSRTC ಬಸ್ ವ್ಯವಸ್ಥೆ, 31ಖಾಸಗಿ ಬಸ್ ವ್ಯವಸ್ಥೆ ಮಾಡಲಾಗಿದೆ. 2234 ವಿದ್ಯಾರ್ಥಿಗಳು KSRTC ಬಸ್ ಮೂಲಕ ಬರಲಿದ್ದು, ಖಾಸಗಿ ಬಸ್ ಮೂಲಕ 572 ವಿದ್ಯಾರ್ಥಿಗಳು ಆಗಮಿಸಲಿದ್ದಾರೆ. ಒಟ್ಟಾರೆ ಜಿಲ್ಲಾದ್ಯಂತ ಸುರಕ್ಷಿತ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಎಲ್ಲಾ ತಯಾರಿ ಮಾಡಲಾಗಿದೆಯೆಂದು ಗದಗ ಡಿಸಿ ಎಂ ಜಿ ಹಿರೇಮಠ ತಿಳಿಸಿದ್ದಾರೆ.

Exit mobile version