Site icon PowerTV

ಸರ್ಕಾರಿ ಗೌರವದೊಂದಿಗೆ ಯೋಧ ಸುನೀಲ್ ಅಂತ್ಯಕ್ರಿಯೆ..!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದ ಯೋಧ ಸುನೀಲ್ ಖಿಲಾರೆ (35) ಜು 01 ರಂದು ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದರು. ವೀರಯೋಧ ಸುನೀಲ್ ಕಳೆದ 17 ವರ್ಷಗಳಿಂದ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ಹೊಟ್ಟೆನೋವು ತಾಳಲಾರದ ಹಿನ್ನೆಲೆಯಲ್ಲಿ ಗುಹವಾಟಿಯ ಆರ್ಮಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ಯೋಧನ ಪಾರ್ಥಿವ ಶರೀರ ಇಂದು‌ ಮಂಗಸೂಳಿ ಗ್ರಾಮಕ್ಕೆ ಆಗಮಿಸಿದ್ದು ಯೋಧನ ತಂದೆ ಸೈನಿಕರಾಗಿದ್ದು ಅಣ್ಣ ಕೂಡಾ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುನೀಲ್ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಸುನೀಲ್ ನ ಅಂತ್ಯಕ್ರಿಯೆ ಮಾಡಲಾಯಿತು.

Exit mobile version