Site icon PowerTV

ಹೋಂ ಕ್ವಾರಂಟೈನ್ ಉಲ್ಲಂಘಿಸಿರುವವರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿರುವವರ ವಿರುದ್ದ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅಲ್ಲದೆ ಈ ಕುರಿತು ವರದಿ ನೀಡುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಮತ್ತು ಹೋಂ ಕ್ವಾರಂಟೈನ್ ಉಲ್ಲಂಘನೆ ಕುರಿತು ಪರಿಶೀಲನೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ1547 ಮಂದಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದು, ಅದರಲ್ಲಿ 1236 ಮಂದಿಗೆ ಎಚ್ಚರಿಕೆ ನೀಡಿದ್ದು, 8 ಮಂದಿಯ ವಿರುದ್ದ ಮಾತ್ರ ಪ್ರಕರಣ ದಾಖಲಿಸಲಾಗಿದೆ, ಹಲವು ಮಂದಿ ಒಂದು ಬಾರಿಗಿಂತಲೂ ಹೆಚ್ಚಿನ ಬಾರಿ ನಿಯಮ ಉಲ್ಲಂಘಿಸಿದ್ದು, ಅಂತಹವರ ವಿರುದ್ದ ಇದುವರೆಗೂ ಪ್ರಕರಣ ದಾಖಲಿಸದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಅವರು ನಿಯಮ ಉಲ್ಲಂಘಿಸಿರುವವರ ವಿರುದ್ದ ಕೂಡಲೇ ಪ್ರಕರಣ ದಾಖಲಿಸಿ ವರದಿ ನೀಡುಬೇಕು, ಇಲ್ಲವಾದಲ್ಲಿ ಸಂಬಂದಪಟ್ಟ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Exit mobile version