ವಿಜಯಪುರ : ಸಂಡೇ ಲಾಕ್ ಡೌನ್ ಗೆ ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ಯವಾಗಿದೆ. ವಿಜಯಪುರ ನಗರದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳು ಸಂಪೂರ್ಣ ಸ್ಥಬ್ದವಾಗಿದ್ದು, ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಲಾಗಿದೆ. ಅಗತ್ಯ ದಿನ ಬಳಕೆ ವಸ್ತುಗಳು, ಅಂಗಡಿ ಮುಂಗಟ್ಟು, ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್ ಹೊರತು ಪಡಿಸಿ ಎಲ್ಲವನ್ನು ಬಂದ್ ಮಾಡಲಾಗಿದೆ. ಬಸ್ ನಿಲ್ದಾಣದ ಬಳಿ ಬಿಗಿ ಪೋಲಿಸ್ ಬಂದೋ ಬಸ್ತ್ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಇನ್ನು ಬೆಂಗಳೂರಿನಿಂದ ಖಾಸಗಿ ಬಸ್ ಗಳಲ್ಲಿ ಬಂದ ಪ್ರಯಾಣಿಕರು ತಮ್ಮ ಊರುಗಳಿಗೆ ಹೋಗಲಾಗದೇ ಪರದಾಡುವಂತಾಗಿದೆ. ಲಾಕ್ ಡೌನ್ ಬಗ್ಗೆ ಮಾಹಿತಿ ಇದ್ದರೂ ಸಹ ಖಾಸಗಿ ಬಸ್ ಗಳು ರಾತ್ರಿ ಸಂಚಾರ ಮಾಡಿ, ಕೆಲವು ಜನರನ್ನ ವಿಜಯಪುರಕ್ಕೆ ಕರೆ ತಂದಿದ್ದವು. ಇನ್ನು ಲಾಕ್ ಡೌನ್ ಇದ್ರು ಸಹ ಅಗತ್ಯವಾಗಿ ರಸ್ತೆಯಲ್ಲಿ ಸುತ್ತಾಡುತ್ತಿರುವವರಿಗೆ ಲಾಠಿ ರುಚಿ ತೋರಿಸಲಾಯಿತು. ಬಸ್ ನಿಲ್ದಾಣದ ಬಳಿ, ಗಾಂಧಿ ವೃತ್ತ, ಗೋದಾವರಿ ಹೊಟೇಲ್, ಸಿಂದಗಿ ಬೈ ಪಾಸ್ ಬಳಿ ಪೊಲೀಸ್ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿ, ವಾಹನ ತಪಾಸಣೆ ಮಾಡಲಾಗುತ್ತಿದ್ದು, ಅಗತ್ಯ ಸೇವೆಯಲ್ಲಿರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ..
