Site icon PowerTV

ವೈದ್ಯರೊಬ್ಬರಿಗೆ ಕೊರೊನಾ ಸೋಂಕು – ಸಾರ್ವಜನಿಕ ಆಸ್ಪತ್ರೆ ಸೀಲ್ ಡೌನ್..!

ರಾಮನಗರ : ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಮಾಗಡಿ ಸಾರ್ವಜನಿಕ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಿಳಾ ವೈದ್ಯರಿಗೆ ಕೋವಿಡ್-19 ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಆಸ್ಪತ್ರೆಯನ್ನು ಸದ್ಯ ಸೀಲ್ ಡೌನ್ ಮಾಡಲಾಗಿದ್ದು, ಇಡೀ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಲಿದ್ದು, ರೋಗಿಗಳು ಪರದಾಡುವಂತಾಗಿದೆ. ಇನ್ನು ವೈದ್ಯರಿಗೆ ಸೋಂಕು ತಗುಲಿರುವ ಮಾಹಿತಿಯಿಂದ ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ‌. ಬೆಳಿಗ್ಗೆಯೆ ಮಾಗಡಿ ಸಾರ್ವಜನಿಕರು ಸಭೆ ಸೇರಿದ್ದು, ಸೋಮವಾರದಿಂದ 10 ದಿನಗಳ‌‌ ಕಾಲ ಮತ್ತೆ‌ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ. ಮಾಗಡಿ ಪಟ್ಟಣದಲ್ಲಿ ಸೋಂಕಿತರ ಸಂಖ್ಯೆ ಪ್ರತಿನಿತ್ಯ ಹೆಚ್ಚಾಗುತ್ತಿದ್ದು, ಇಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ. ಈವರೆಗೆ ಮಾಗಡಿಯಲ್ಲಿ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ‌.

Exit mobile version