Site icon PowerTV

ಕೊರೋನಾ ಹಿನ್ನಲೆ ಜಿಲ್ಲೆಯಲ್ಲಿ 6 ಸಾವು

ಉಡುಪಿ : ಕೊರೋನಾ ಸೊಂಕೀತ‌ರೋರ್ವರು ನಿನ್ನೆ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಡುಪಿ ನಗರದ ನಿವಾಸಿಯಾಗಿರುವ ಇವರು ಹೈ ಶುಗರ್ ನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆ ಗೆ ರೋಗಿಯನ್ನು ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಆರೋಗ್ಯ ಬಿಗಡಾಯಿಸಿದ ಹಿನ್ನಲೆಯಲ್ಲಿ ನಗರದ ಡಾ.ಟಿ.ಎಂ.ಎ.ಪೈ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಹಿನ್ನಲೆಯಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ.

Exit mobile version