Site icon PowerTV

ಕಲ್ಲು ಗಣಿಗಾರಿಕೆ ಪರ ಪ್ರೊಟೆಸ್ಟ್; ಡಿಸಿ ಆದೇಶಕ್ಕಿಲ್ಲಿ ಡೋಂಟ್ ಕೇರ್!

ಮಂಡ್ಯ: ಕೆಆರ್‌ಎಸ್ ಸಮೀಪದ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಕಾವೇರಿಪುರ ಗ್ರಾಮದ ನಿವಾಸಿಗಳು ಪ್ರತಿಭಟನೆ ಮಾಡಿ ಡಿಸಿಗೆ ಮನವಿ ಸಲ್ಲಿಸಿದರು.
ಕೆಆರ್‌ಎಸ್ ಡ್ಯಾಂಗೆ ಅಪಾಯದ ಭೀತಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ, ಗಣಿಗಾರಿಕೆ ನಿಷೇಧದಿಂದ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೊರೋನಾದಿಂದ ಬೇರೆ ಎಲ್ಲೂ ಕೆಲಸ ಸಿಗುತ್ತಿಲ್ಲ. ಒಂದು ಹೊತ್ತು ಊಟಕ್ಕೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಕೂಲಿ ಸಿಗುತ್ತದೆ ಎಂದು ಮನವಿ ಸಲ್ಲಿಸಿದರು.
ಕಾನೂನಾತ್ಮಕವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವಂತೆ ಆಗ್ರಹ ಮಾಡಿದರು. ಲಾರಿಗಳಲ್ಲಿ ಡಿಸಿ ಕಚೇರಿ ಬಳಿಗೆ ಆಗಮಿಸಿದ ಬೃಹತ್ ಸಂಖ್ಯೆಯ ಕಾರ್ಮಿಕರು ಆಕ್ರೋಶ ಹೊರ ಹಾಕಿದರು.
ಡಿಸಿ ಆದೇಶಕ್ಕಿಲ್ಲಿ ಡೋಂಟ್ ಕೇರ್: ಕೊವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಸಮಾವೇಶಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಆದರೆ ನಿರ್ಬಂಧದ ನಡುವೆಯೂ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಶಶಿಕುಮಾರ್, ಪವರ್ ಟಿವಿ, ಮಂಡ್ಯ.

Exit mobile version