Tuesday, September 2, 2025
HomeUncategorized300 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ

300 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ

ಉಡುಪಿ : ಬಹು ಚರ್ಚಿತ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ  ಸಭೆ ಇಂದು ನಡೆಯಿತು. ಸಭೆಯಲ್ಲಿ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದಾರೆ. ಸಭೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಕ್ಕೆ ಭೂಮಿಯ ಧಾರಣಾ ಸಾಮರ್ಥ್ಯ ಅಧ್ಯಯನದ ಕುರಿತು ಚರ್ಚೆ ನಡೆದು ಎಲ್ ಆಂಡ್ ಟಿ‌ ಕಂಪೆನಿ ಮೂಲಕ ನಿರ್ಮಾಣ ಕಾರ್ಯ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು. ಸುಮಾರು 200 ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯ ಅಧ್ಯಯನ ನಡೆಸಿ, 200 ಅಡಿ ಆಳದಲ್ಲಿ ತಾಮ್ರ ಪತ್ರ ಇರಿಸಲು ತೀರ್ಮಾನ ಮಾಡಲಾಯಿತು. ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಸುಮಾರು ಮುನ್ನೂರು ಕೋಟಿ ವೆಚ್ಚದಲ್ಲಿ ಮಂದಿರ ನಿರ್ಮಾಣ ಮಾಡಲ ಸಂಕಲ್ಪವಿದ್ದು, ಎಪ್ಪತ್ತು ಎಕರೆ ಪರಿಸರ ಅಭಿವೃದ್ದಿಗೆ ಸಾವಿರ ಕೋಟಿ ರೂ ಅವಶ್ಯಕತೆ ಇರುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಗಿದೆ. ರಾಮಭಕ್ತರ ಪಾಲ್ಗೊಳ್ಳುವಿಕೆ ಮೂಲಕ ಬೇರೆ ಬೇರ ಕಂಪೆನಿಗಳ‌ ಸಿಎಸ್ ಆರ್ ಫಂಡ್ ಮೂಲಕ ಹಣ ಸಂಗ್ರಹ ಮಾಡುವ ತೀರ್ಮಾನಿಸಲಾಯಿತು. ಪ್ರತೀ ವ್ಯಕ್ತಿಯ ಮೂಲಕ ಹತ್ತು ರೂಪಾಯಿ, ಮನೆಯಿಂದ ನೂರು ರುಪಾಯಿ ಸಂಗ್ರಹಕ್ಕೆ ಚಿಂತನೆ ನಡೆಯಿತು. ಈ ಕುರಿತು ವ್ಯಾಪಕ ಆಂಧೋಲನ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.ನವೆಂಬರ್ 25 ರಿಂದ ಡಿಸೆಂಬರ್ 25 ತನಕ ದೇಶಾದ್ಯಂತ ಆಂಧೋಲನಕ್ಕೆ ನಡೆಸಲು ತೀರ್ಮಾನಿಸಲಾಯಿತು. ಭೂಮಿ ಪೂಜನಾ ಕಾರ್ಯದ ದಿನಾಂಕ ನಿಗದಿ ಕುರಿತು ಶೀಘ್ರ ತೀರ್ಮಾನ ಚರ್ಚೆ ನಡೆದು, ಹದಿನೈದು ದಿನಗಳ ಮುಂದೆ ಭೂಮಿ ಪೂಜನ ದಿನಾಂಕ ಘೋಷಣೆ ವಿಚಾರದ ಬಗ್ಗೆ ಚರ್ಚೆಯಾಗಿರುವ ಕುರಿತು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿಜಿ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments